ಆತ್ಮೀಯ ರೈತ ಬಾಂದವರೇ ಈ ವರ್ಷ ಮುಂಗಾರು ಹಂಗಾಮು ಕೈ ಕೊಟ್ಟು ರೈತರ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿರುವಾಗ ರೈತರಿಗೆ ಅಲ್ಪ ಸಹಾಯಹಸ್ತವನ್ನು ರಾಜ್ಯ ಸರ್ಕಾರ ನೀಡಿದೆ.
ಹೌದು, ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ದಿನಾಂಕ: 31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸರ್ಕಾರದ ಆದೇಶದಲ್ಲಿ, ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ.
ರಾಜ್ಯದಲ್ಲಿ ಉದ್ಭವಿಸಿರುವ ಅನಾವೃಷ್ಟಿಗಳ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸಹಕಾರ ಸಂಸ್ಥೆಗಳಿಂದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದು ಸಾಲ ಮರುಪಾವತಿಸಲು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದನ್ನು ಮತ್ತು ಇದರಿಂದ ಸಹಕಾರ ಸಂಸ್ಥೆಗಳು ನಬಾರ್ಡ್ ನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೇ ಪುನಃ ರೈತರಿಗೆ ಸಾಲ ನೀಡಲು ತೊಂದರೆಯಾಗುತ್ತಿರುವುದನ್ನು ಮನಗಂಡು ಇಂತಹ ಸುಸ್ತಿದಾರರಾದ ರೈತರನ್ನು ಋಣಮುಕ್ತರನ್ನಾಗಿ ಮಾಡಿ ಮುಂದಿನ ತಮ್ಮ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆದು ಅರ್ಹತೆ ಗಳಿಸಲು ಸರ್ಕಾರವು ಯೋಜನ ರೂಪಿಸುವುದು ಅತ್ಯವಶ್ಯಕವಾಗಿರುತ್ತದೆ. ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಸಹಕಾರ ಸಂಘಗಳ ನಿಬಂಧಕರ ಪತ್ರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳನ್ನು ಪಡೆದು ದಿನಾಂಕ:31.12.2023ರ ಅಂತ್ಯಕ್ಕೆ ಸಹಕಾರ ಸಂಸ್ಥೆಗಳಿಗೆ 56,879-ರೈತರಿಂದ . 58,515.96/- ಲಕ್ಷಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲಗಳು ಸುಸ್ತಿಯಾಗಿದ್ದು, ಇದರ ಮೇಲಿನ ಬಡ್ಡಿ, ಬಾಬು ರೂ. 44,020.50/- ಲಕ್ಷಗಳಾಗಿರುತ್ತವ ಎಂದು ತಿಳಿಸಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ, ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರಾತಿ ನೀಡಲಾಗಿದೆ
Conditions of Govt: ಸರ್ಕಾರದ ಷರತ್ತುಗಳು ಈ ಕೆಳಗಿನಂತಿವೆ:
1.ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ :31.12.2023 ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
2.ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
3. ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ :31.12.2023 ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರಣ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.
4.ಈ ಯೋಜನೆಯಡಿಯಲ್ಲಿ ಪ್ರಾಥಮಿಕ ಸಹಕಾರ ಸಂಘಗಳು, ಲ್ಯಾಂಪ್ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್) ಗಳಿಗೆ ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲು ದಿನಾಂಕ:01.04.2004 ಕ್ಕಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಬಡ್ಡಿ ಪಾವತಿಸಲು ಬಾಕಿ ಇದ್ದ ದಿನಾಂಕದಿಂದ ಸಾಲ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿಮಾಡಲಾಗಿರುವ ಬಡ್ಡಿ, ದರ ಅಥವಾ ಶೇ. 12 ರ ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂತಹ ಬಡ್ಡಿ, ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.
5.ದಿನಾಂಕ:01.04.2004ರ ನಂತರದಲ್ಲಿನ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬಡ್ಡಿ ಮತ್ತು ಸರ್ಕಾರ ಪಾವತಿಸಬೇಕಾದ ಬಡ್ಡಿ ಸಹಾಯಧನದ ಒಟ್ಟು ಬಡ್ಡಿ ಅಥವಾ ಗರಿಷ್ಟ ಶೇ.12 ಇದರಲ್ಲಿ ಯಾವುದು ಕಡಿಮೆಯೋ ಆ ಬಡ್ಡಿಯನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು. ರೂ.10.00 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ಸಾಮಾನ್ಯ ಬಡ್ಡಿ ದರದಲ್ಲಿ ವಿತರಿಸಿದ್ದರೂ ಸಹ ಆಯಾ ವರ್ಷದಲ್ಲಿ ರೂ.10.00 ಲಕ್ಷಗಳವರೆಗೆ ನಿಗದಿಪಡಿಸಿದ ಬಡ್ಡಿ ದರದನ್ವಯ ಬಡ್ಡಿ ಮನ್ನಾ ಮೊತ್ತ ಕೈಮು ಮಾಡತಕ್ಕದ್ದು
6.ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ. ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ ವಸೂಲಿ ವೆಚ್ಚ. (Recovery Charges) ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಷೇಮು ಮಾಡತಕ್ಕದ್ದಲ್ಲ.
7.ಈ ಯೋಜನೆಯಲ್ಲಿ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಒದಗಿಸಿರುವ ಆಯವ್ಯಯದ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಲೆಕ್ಕಶೀರ್ಷಿಕೆಯಲ್ಲಿ ಭರಿಸತಕ್ಕದ್ದು.
8.ಈ ಯೋಜನೆಯಡಿ ಕ್ಷೇಮ್ ಬಿಲ್ಲುಗಳನ್ನು ಸಹಕಾರ ಸಂಘಗಳು ವಸೂಲಾತಿ ಅಂತಿಮ ದಿನಾಂಕದಿಂದ 45 ದಿನಗಳೊಳಗಾಗಿ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು, ರೈತರು ಸುಸ್ತಿ ಅಸಲು ಮೊತ್ತವನ್ನು ಮರುಪಾವತಿಸುವ ದಿನಾಂಕದವರೆಗೆ ಮಾತ್ರ ಬಡ್ಡಿ ಕ್ಷೇಮುಗಳಿಗೆ ಅವಕಾಶವಿರುತ್ತದೆ. ಯಾವುದೇ ಕಾರಣದಿಂದಾಗಿ ಕ್ಷೇಮು ಮೊತ್ತ ಬಿಡುಗಡೆಗೆ ಆಗುವ ವಿಳಂಬದ ಅವಧಿಗೆ ಯಾವುದೇ ಕೈಮುಗಳಿಗೆ ಅವಕಾಶವಿರುವುದಿಲ್ಲ.
9.ಪ್ಯಾಕ್ಸ್/ಲ್ಯಾಂಪ್ಸ್ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕುಗಳ ಬಿಲ್ಲುಗಳನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಬಿಲ್ಲುಗಳನ್ನು ಬಿಡುಗಡೆಗೆ ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್ ಬ್ಯಾಂಕ್ ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್)ಗಳ ಬಿಲ್ಲುಗಳನ್ನು ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಕಸ್ಕಾರ್ಡ್ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು.
11.ಸಹಕಾರ ಸಂಘಗಳ ನಿಬಂಧಕರು ಅರ್ಹ ಕ್ರಮ್ ಗಳನ್ನು ವರಿಶೀಲಿಸಿ, ನಿಗಧಿತವಾಗಿ ಹಣ ಬಿಡುಗಡೆಗೆ ಕ್ರಮವಿಡತಕ್ಕದ್ದು ಮತ್ತು ಕಾಲಕಾಲಕ್ಕೆ ಸರ್ಕಾರಕ್ಕೆ ಬಳಕೆ ಪ್ರಮಾಣ ಪತ್ರವನ್ನು ಒದಗಿಸತಕ್ಕದ್ದು,
12.ಸಹಕಾರ ಸಂಘಗಳ ನಿಬಂಧಕರು ಈ ಯೋಜನೆ ಅನುಷ್ಠಾನಕ್ಕಾಗಿ ಅಗತ್ಯವಿರುವ ಪ್ರಪತ್ರಗಳನ್ನು ಒದಗಿಸಲು ಮತ್ತು ಕಾಲಕಾಲಕ್ಕೆ ಸಂಬಂಧಿಸಿದವರಿಗೆ ಅಗತ್ಯ ಸಲಹೆ/ಸೂಚನೆ/ನಿರ್ದೇಶನಗಳನ್ನು ನೀಡತಕ್ಕದ್ದು.
13.ಈ ಯೋಜನೆಯು ಜಾರಿ ಇರುವ ಬಗ್ಗೆ, ಎಲ್ಲಾ ಸಾಲಗಾರ ಸದಸ್ಯರಿಗೆ ಪತ್ರದ ಮುಖೇನ ಸಾಲದ ಸೌಲಭ್ಯ ಮತ್ತು ಇದರಿಂದ ರೈತ ಸದಸ್ಯರಿಗೆ ದೊರೆಯುವ ರಿಯಾಯಿತಿ ವಿವರಗಳನ್ನು ಸಂಘದ ಮೂಲಕ ತಿಳಿಸುವ ವ್ಯವಸ್ಥೆಯನ್ನು ನಿಬಂಧಕರು ಮಾಡತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: FD 10 Exp-2/2024, ದಿನಾಂಕ: 20-01-2024ರ ನೀಡಿರುವ ಸಹಮತಿಯಂತೆ ಹೊರಡಿಸಲಾಗಿದೆ.
ಸರ್ಕಾರ ಆದೇಶಕ್ಕಾಗಿ ಈ ಸರ್ಕಾರದ ಆದೇಶ ಮೇಲೆ ಓತ್ತಿ…
ಇದನ್ನೂ ಓದಿ: Interest Free Loan Scheme 2023-24: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸರ್ಕಾರದಿಂದ ಬಡ್ಡಿ ರಹಿತ ಸಾಲ