Friday, January 17, 2025

Indian military college admission- ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

ಜನವರಿ 2025ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ(Indian military college admission) 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 01, 2024 ರಂದು ನಡೆಸಲಾಗುವುದು.

ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2025 ರಂತೆ 11% ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2012 ರಿಂದ 01-07-2013 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ಇದನ್ನೂ ಓದಿ: Aadhar card Update : ಆಧಾರ್‍ ನವೀಕರಣ ಮಾಡಲು Website link ಬಿಡುಗಡೆ

ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವ ರೀತಿಯ ವಿದ್ಯಾಭ್ಯಾಸ/ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.1,075,00/-ಗಳು (ಸಾಮಾನ್ಯ ವರ್ಗ) ಹಾಗೂ ರೂ 93,900/- (ಎಸ್‌ಸಿ/ಎಸ್‌ಟಿ) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.30,000/-

ಇದನ್ನೂ ಓದಿ: PM Kisan ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

ಭದ್ರತಾ ಠೇವಣಿ ನೀಡಬೇಕಾಗುತ್ತದೆ(ind in annual fee) ಸದರಿ ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿದ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿತಿರುಗಿಸಲಾಗುವುದು.

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ 248003 ಮೂಲಕ ಪಡೆಯಬಹುದು. ಅಲ್ಲದೇ ಆನ್‌ಲೈನ್ ಪಾವತಿ ಮೂಲಕವೂ ಸಹ ಪಡೆಯಬಹುದಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳು ಮತ್ತು ಎಸ್ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.555/-ಗಳನ್ನು ಪಾವತಿ ಮಾಡುವ ಮೂಲಕ

ಪ್ರಾಸ್ಪೆಕ್ಸಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು. ವೆಬ್ ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.

ಇದನ್ನೂ ಓದಿ: PM kisan Scheme 16 Beneficiaries list: ಪಿ ಎಂ ಕಿಸಾನ್ 16 ನೇ ಕಂತಿನ ಅರ್ಹ ಫಲಾನುಭವಿಗಳ ಪಟ್ಟಿ:

ಪ್ರಾಸೆಕ್ಸಸ್ ಕವತ್- ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು. “THE COMMANDANT RIMC FUND” PAYABLE AT HDFC BANK, BALLUPUR CHOWK DEHRADUN (BANK CODE 1399), UTTARAKHAND, ಸಂಖ್ಯೆಯೊಂದಿಗೆ

ದೊಡ್ಡ ಅಕ್ಷರಗಳಲ್ಲಿ ಟಾಯಿಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‌ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ RIMC ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಡಕೆಗಳೊಂದಿಗೆ ಏಪ್ರಿಲ್ 15 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು – 25. ಇವರಿಗೆ, ಸಲ್ಲಿಸುವುದು.

ಅರ್ಜಿಯೊಂದಿಗೆ ಮುನ್ಸಿಪಾಲಿಟಿ/ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಪಾಸ್‌ಪೋರ್ಟ್ ಸೈಜಿನ ಭಾವಚಿತ್ರಗಳು.(ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ), ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ ಇರುವಂತೆ ಮಾತ್ರ),

ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ನೊಂದಾಯಿತ ಅಂಚೆ ದ್ವಾರ ರವಾನಿಸಲು ರೂ. 42/-ರ ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ, ಶಾಲಾ ಪ್ರಾಚಾರ್ಯರು/ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಢೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ), ಕರ್ನಾಟಕ ರಾಜ್ಯದ ವಾಸಸ್ಥಾನ ಧೃಡೀಕರಣ ಪತ್ರ, ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ:

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ವೆಬ್ಸೈಟ್: Click here

ಇತ್ತೀಚಿನ ಸುದ್ದಿಗಳು

Related Articles