ಕರ್ನಾಟಕ ಹಾಲು ಒಕ್ಕೂಟದಿಂದ ರೈತರಿಗೆ ಸಿಹಿ ಸುದ್ಧಿ ನೀಡಿದ್ದು, ಡೈರಿಗಳಿಗೆ ಪೂರೈಕೆ ಮಾಡುವ ಹಾಲಿಗೆ ದರವನ್ನು(KMF) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
ಸಾಮಾನ್ಯವಾಗಿ ಮಳೆಗಾಲಕ್ಕೆ ಹೋಲಿಕೆ ಮಾಡಿದರೆ ಬೇಸಿಗೆ ಸಮಯದಲ್ಲಿ ಹಾಲಿನ ಇಳುವರಿಯು ಕಡಿಮೆಯಿರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ಆರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಒಕ್ಕೂಟದಿಂದ ಸಭೆಯನ್ನು ನಡೆಸಿ ಪ್ರತಿ ಲೀಟರ್ ಹಾಲಿಗೆ (Milk price hike) ಇಂತಿಷ್ಟು ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ.
ಪ್ರಸ್ತುತ ಹಾಲಿನ ದರ ಎಷ್ಟು? ಏರಿಕೆ ಮಾಡಿರುವ ದರ(Milk price hike) ವಿವರ ಸೇರಿದಂತೆ ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಗೆ ನೀಡುವ ರೂ 5 ಸಹಾಯಧನವನ್ನು ರೈತರಿಗೆ ಜಮಾ ಆಗಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳವುದು ಹೇಗೆ ಎನ್ನುವ ಮಾಹಿತಿಯನ್ನು ಸಹ ಈ ಅಂಕಣದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ನಿಮ್ಮದು ಇನ್ನೂ ಇ-ಸ್ವತ್ತು ಮಾಡಿಸಿಲ್ಲವೇ! ಇಲ್ಲಿದೆ ಸಿಹಿ ಸುದ್ಧಿ: ಇ-ಸ್ವತ್ತು ಆಂದೋಲನ!
KMF Milk price hike-ಪ್ರತಿ ಲೀಟರ್ ಹಾಲಿಗೆ ರೂ.2 ಹೆಚ್ಚಳ:
ಕರ್ನಾಟಕ ಹಾಲು ಒಕ್ಕೂಟದ ಬಹುತೇಕ ಎಲ್ಲಾ ಒಕ್ಕೂಟ ವ್ಯಾಪ್ತಿಯಲ್ಲಿರುವ ಹಾಲಿನ ದರವನ್ನು ಏಕೆ ಮಾಡಲು ನಿರ್ಣಯ ಕೈಗೊಂಡಿದ್ದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ರೈತರಿಂದ ಡೈರಿಗಳ ಮೂಲಕ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ರೂ.2 (Milk price hike) ಹೆಚ್ಚಳ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು ಬೇಸಿಗೆ ಹಂಗಾಮಿನಲ್ಲಿ ರೈತರಿಗೆ ತಮ್ಮ ಹೈನುರಾಸುಗಳ ನಿರ್ವಹಣ ವೆಚ್ಚವು ಹೆಚ್ಚಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಂದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ದರ ಪರಿಷ್ಕರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಗಿತ್ತು.
ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರವನ್ನು ಪ್ರತಿ ಲೀಟರ್ ಗೆ ರೂ.2 ಹೆಚ್ಚಿಸಿ ಪರಿಷ್ಕರಿಸಲು ಒಕ್ಕೂಟದ ಅದ್ಯಕ್ಷ ಹೆಚ್.ಎನ್. ವಿದ್ಯಾಧರ್ ಅಧ್ಯಕ್ಷತೆಯಲ್ಲಿ ಜ.31 ರಂದು ನಡೆದ ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ತಿರ್ಮಾನಿಸಲಾಗಿದೆ.
ಇದನ್ನೂ ಓದಿ:3ದಿನಗಳ ಕಾಲ ರಾಷ್ಟ್ರೀಯ ತೋಟಗಾರಿಕೆ ಮೇಳ ಆಯೋಜನೆ! ಈ ಬಾರಿ ಮೇಳದ ವಿಶೇಷತೆಗಳು.
ಕೊಬ್ಬಿನಂಶ(milk fat)ದ ಆಧಾರದ ಮೇಲೆ ಹಾಲಿನ ದರ ವಿವರ ಹೀಗಿದೆ:
ಒಕ್ಕೂಟದಿಂದ ಸಂಘಗಳಿಗೆ ಪ್ರಸ್ತುತ ಎಫ್ಎಟಿ 4.0%, ಎಸ್ಎನ್ಎಫ್ 8.50%, ಇರುವ ಪ್ರತಿ ಕೆ.ಜಿ. ಹಾಲಿಗೆ 32.09 ರೂ. ಪರಿಷ್ಕೃತ ದರ 34.18 ರೂ. ಸಂಘದಿಂದ ಉತ್ಪಾದಕರಿಗೆ ಪ್ರಸ್ತುತ ಎಫ್ಎಟಿ 4.0% ಎಸ್ಎನ್ಎಫ್ 8.50% ಇರುವ ಪ್ರತಿ ಲೀ.ಹಾಲಿಗೆ 30.13 ರೂ. ಪರಿಷ್ಕೃತ ದರ 32.22 ರೂ. ಪರಿಷ್ಕೃತ ದರವು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಾಲಿನ ಪ್ರೋತ್ಸಾಹ ದರ ತಿಳಿಯಲು ಇಲ್ಲಿದೆ ಲಿಂಕ್:Click here