Thursday, November 21, 2024

Bed.Ded:ಬಿ.ಎಡ್ ಮತ್ತು ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ:

ಆತ್ಮೀಯ ಪ್ರೀಯ ವಿದ್ಯಾರ್ಥಿಗಳೇ BEd ಮತ್ತು DEd ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಏಜ್ಯುಕೇಷನ್ ನಿಂದ ಮಾನ್ಯತೆ ಪಡೆದಿರುವ ಬಿ.ಎಡ್ ಹಾಗೂ ಡಿಪಾರ್ಟಮೆಂಟ್ ಆಫ್ ಸ್ಟೇಟ್ ಏಜ್ಯುಕೇಷನ್ ರೀಸರ್ಚ & ಟ್ರೈ ನಿಂಗ್ ನಿಂದ ಮಾನ್ಯತೆ ಪಡೆದಿರುವ

ಡಿ.ಎಡ್ ಕೋರ್ಸಗಳ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸಗಳ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆರೂ. 25,000 ಗಳ ವಿಶೇಷ ಪ್ರೋತ್ಸಾಹಧನ ಪ್ರತಿ ವರ್ಷ (ಗರಿಷ್ಠ 2 ವರ್ಷ) ಮಾತ್ರ ನೀಡಲಾಗುತ್ತಿದೆ.

ಇದನ್ನೂ ಓದಿ: LIC : 25000/-ರೂ ವಿದ್ಯಾಧನ್ ಸ್ಕಾಲರ್‌ಷಿಪ್ ಗೆ ಅರ್ಜಿ ಆಹ್ವಾನ :
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಕಾರ್ಯಕ್ರಮ:


ಇದನ್ನೂ ಓದಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಯಿಂದ ಪ್ರಕಟಣೆ: ವಿದ್ಯಾರ್ಥಿಗಳು ಅವಶ್ಯಕವಾಗಿ ನೋಡಿ.
ಇದನ್ನೂ ಓದಿ: ಕೃಷಿ ಸಂಬಂದಿಸಿದ ಉದ್ಯಮಕ್ಕೆ, ತರಬೇತಿ ಜೊತೆಗೆ ಆರ್ಥಿಕ ಸಹಾಯಧನ.

ಅರ್ಜಿ ಸಲ್ಲಿಸುವುದು ಎಲ್ಲಿ?

ಅರ್ಜಿ ಸಲ್ಲಿಸುವ ವಿಧಾನ: ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ವಿಶೇಷ ಪ್ರೋತ್ಸಾಹಧನಕ್ಕೆ ವೆಬ್‌ಸೈಟ್

https://sevasindhu.karnataka.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಸ್ವೀಕೃತವಾದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.

ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಹಾಗೂ ಷರತ್ತುಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಥವಾ ತಾಲೂಕು ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ದೂ.ಸಂ: 08539-225070, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ದೂ.ಸಂ: 08533-230027 ಮೊ.ಸಂ: 9620522537 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಸುರೇಶ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿಗಳು

Related Articles