Wednesday, February 5, 2025

PSI exam- 402 ಪಿಎಸ್ಐ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ!

ಮೇ 8 ರಂದು ನಿಗದಿಯಾಗಿದ್ದ 402 ಪಿಎಸ್ಐ ಹುದ್ದೆಗಳ ಲಿಖಿತ ಪರೀಕ್ಷೆಯನ್ನು(PSI exam) ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಎಕ್ಸಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಮುಂದಿನ ಪರೀಕ್ಷಾ ದಿನಾಂಕವನ್ನು(PSI exam date) ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್ ಮಾಡಿದೆ.

Navodaya Job News: ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಉದ್ಯೋಗ :ವೇತನ: 18,000/-1,42,000/- ರೂ ನಿಗಧಿಪಡಿಸಲಾಗಿದೆ.

ಇದನ್ನೂ ಓದಿ: First installment drought payment Failure list:ಬರ ಪರಿಹಾರ ಹಣ ಬರದೇ ಇರುವವರ ಪಟ್ಟಿ ಮತ್ತು ಕಾರಣ :

ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇಐ 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ. ಅದರಂತೆ ದಿನಾಂಕ 08.05.2024 ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

ಇದನ್ನೂ ಓದಿ: ಬೆಳೆಹಾನಿ, ಬೆಳೆವಿಮೆ ,ಮತ್ತು ಪಿ ಎಂ ಕಿಸಾನ್ ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ದಿನಾಂಕ 08.05.2024 ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳು

Related Articles