Sunday, August 31, 2025

Rain and weather Forecast : ಇಂದಿನ ರಾಜ್ಯದ ಹವಾಮಾನ ಮುನ್ಸೂಚನೆ

Coastal Rain and weather Forecast : ಕರಾವಳಿ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಜುಲೈ 15ರಂದು ಒಂದು ದಿನ ಮಳೆ ಕಡಿಮೆ ಇದ್ದರೂ 16ರಿಂದ ಉಡುಪಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಇದನ್ನೂ ಓದಿ: Agriculture department: ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ :

Malnad Rain and Weather Forecast : ಮಲೆನಾಡು ಹವಾಮಾನ ಮುನ್ಸೂಚನೆ :
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ ಜುಲೈ 22ರ ತನಕವೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳು ಕಾಣುತ್ತವೆ.

North Interior Rain and Weather Forecast : ಉತ್ತರ ಒಳನಾಡು ಹವಾಮಾನ ಮುನ್ಸೂಚನೆ :
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿರುತ್ತದೆ.

Southern Interior Rain and Weather Forecast : ದಕ್ಷಿಣ ಒಳನಾಡು ಹವಾಮಾನ ಮುನ್ಸೂಚನೆ :
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ.
ಈಗಿನಂತೆ ಜುಲೈ 14ರಿಂದ ಮಳೆಯ ಪ್ರಮಾಣ ಕಡಿಮೆಯಾದರೂ, ಜುಲೈ 16ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: Weed Mat Subsidy: ತೋಟಗಾರಿಕೆ ಇಲಾಖೆಯಿಂದ ಕಳೆ ಚಾಪೆಗೆ 1.ಲಕ್ಷ ರೂ. ಸಹಾಯಧನ

ವಿಶೇಷ ಸೂಚನೆ: 14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಆಗಿರುತ್ತದೆ.

ಮಳೆ ಹೆಚ್ಚಾಗುವ ನಿರೀಕ್ಷೆ ಕಾರಣವೇನು?
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿ ಭಾಗಗಳಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗಿದೆ. ಇದರಿಂದ ಮುಂಗಾರು ಮಳೆ ಉತ್ತರ ಭಾರತದ ಕಡೆ ಹೆಚ್ಚಾಗುವ ನಿರೀಕ್ಷೆ ಇದೆ.

ಮಾಹಿತಿ.

ಸಾಯಿಶೇಖರ್ ಕರಿಕಳ

ಇತ್ತೀಚಿನ ಸುದ್ದಿಗಳು

Related Articles