ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಮಳೆ ಮಾಹಿತಿ ನಕ್ಷೆಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅತ್ಯಧಿಕ 120.50 mm ಮಳೆ(karnatakata rain weather) ದಾಖಲಾಗಿರುತ್ತದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮದವರೆಗೆ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಹಾಗೂ ಅಧಿಕ ಮಳೆ ದಾಖಲಾಗಿರುತ್ತದೆ.
ಈ ಲೇಖನದಲ್ಲಿ ಮುಂಗಾರು ಮಳೆ ಮಾಹಿತಿ, ರಾಜ್ಯದ ನಾಳೆಯ ವರೆಗಿನ ಮಳೆ ಮುನ್ಸೂಚನೆ ಮತ್ತು ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ವಿವರಗಳನ್ನು ತಿಳಿಸಲಾಗಿದ್ದು, ಈ ಮಾಹಿತಿಯು ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬೇರೆ ಬೇರೆ ವಾಟ್ಸಪ್ ಗ್ರೂಪ್ ಗಳಿಗೆ ಶೇರ್ ಮಾಡಿ.
ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಅತಿ ಭಾರಿ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
Rain fall-ನಾಳೆ ಬೆಳಗ್ಗೆ(09/07/2024) 8.00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ ವಿವರ:
ಕಾರಸಗೋಡು,ದಕ್ಷಿಣ ಕನ್ನಡ, ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಬರುವ ಉತ್ತಮ ಮಳೆಯ ಮುನ್ಸೂಚನೆ ಇರುತ್ತದೆ. ಕರಾವಳಿ ತೀರ ಭಾಗಗಳಲ್ಲಿ ಬಿಡುವು ಕಡಿಮೆ ಇದ್ದು, ಉತ್ತಮ ಮಳೆಯ ಸಾಧ್ಯತೆ ಇದೆ. ಉಳಿದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇರುತ್ತದೆ.
ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಮೈಸೂರು,ಚಾಮರಾಜನಗರ,ಮಂಡ್ಯ, ರಾಮನಗರ, ಧಾರವಾಡ,ಚಿಕ್ಕೋಡಿ, ಬೆಳಗಾವಿ,ಕಲಬುರ್ಗಿ,ಬೀದರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇರುತ್ತದೆ.
ಇನ್ನೂ ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
Next 7 days rain forecast news-ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ಮಾಹಿತಿ:
ಜುಲೈ 7 ರಿಂದ ಜುಲೈ 14 ರವರೆಗೂ ಮಳೆ ಮುನ್ಸೂಚನೆ ಮಾಹಿತಿ ಜುಲೈ 8 ರ ವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮತ್ತು ಅತ್ಯಧಿಕ ಮಳೆ ಮುನ್ಸೂಚನೆಯನ್ನು ಹವಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು, ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇರುತ್ತದೆ.
ಮನೆಯಲ್ಲಿ ಕುಳಿತು ಮಳೆ ಮಾಹಿತಿ ತಿಳಿಯಲು ಇಲ್ಲಿದೆ ಲಿಂಕ್ Click here…..