ಹೌದು ಸಾರ್ವಜನಿಕರೇ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತಹ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ನೇಮಕಾತಿ ಸಂಬಂಧ ಪಟ್ಟ ಮಾಹಿತಿಗೆ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.
ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಪ್ರಬಲ ಹಾಗೂ ಹೆಚ್ಚು ಶಾಖೆಗಳನ್ನು ಹೊಂದಿದ ಸಹಕಾರಿ ಬ್ಯಾಂಕ ಎಂದರೆ ಅದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಮಾತ್ರ. ಈ ಬ್ಯಾಂಕಿನ ಈಗಾಗಲೇ ಅಂದಾಜು 25-30 ಶಾಖೆಗಳಿವೆ. ಎಲ್ಲಾ ಶಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳು ಒಟ್ಟು 123 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಶೈಕ್ಷಣಿಕ ಅರ್ಹತೆಯ ವಿವರ:Educational qulification
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತಹ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗಿಕೃತ ವಿಶ್ವ ವಿದ್ಯಾಲಯದಿಂದ ಪದವಿ ಮುಗಿಸಿದ್ದು, ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.
ವಯೋಮಿತಿ ಅರ್ಹತೆಗಳು: Age limit Details
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತಹ ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹೊಂದಿರಬೇಕಾಗಿದ್ದು, ಗರಿಷ್ಠ ವಯೋಮಿತಿ ಸಡಲಿಕೆ ಹೀಗಿದೆ.
1)ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ
2)ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ
3)ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ
ವೇತನ ಶ್ರೇಣಿ ಹೀಗಿದೆ:Salary Details
ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 24,910 ರಿಂದ 55,655 ರೂಪಾಯಿಗಳವರೆಗೂ ವೇತನ ಸಿಗುತ್ತದೆ.
ಅಭ್ಯರ್ಥಿಗಳ ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದಲ್ಲಿ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕದ ವಿವರ:
1)ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ರೂ.590/- ಅರ್ಜಿ ಶುಲ್ಕ ಪಾವತಿಸಬೇಕು.
2) ಸಾಮಾನ್ಯ ಹಾಗೂ ಉಳಿದ ವರ್ಗದ ಅಭ್ಯರ್ಥಿಗಳು ರೂ.1180/- ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು ದಿನಾಂಕ ಜುಲೈ 18,2024 ಕೊನೆಯ ಸಮಯವಾಗಿದೆ. ಈ ಸಮಯದ ಒಳಗೆ ಅರ್ಜಿ ಸಲ್ಲಿಸಿ.
ಅರ್ಜಿಸಲ್ಲಿಸಲು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕೃತ ಜಾಲತಾಣದ ಮೇಲೆ ಕ್ಲಿಕ್ ಮಾಡಿ ಪ್ರವೇಶ ಮಾಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ. Click here…www.scdccbank.com