Thursday, November 21, 2024

Schoolarship-ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.

ಕರ್ನಾಟಕ ರಾಜ್ಯ ಸರಕಾರವು 2023-24 ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ(6 ರಿಂದ10 ನೇತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

2023-24 ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ(6 ರಿಂದ10 ನೇತರಗತಿ) ವಿದ್ಯಾರ್ಥಿಗಳಿಗೆ 10000/- ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ನೀಡಲಾಗುವುದು.

ಆದ್ದರಿಂದ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು ನೇರ ಭೇಟಿ ನೀಡಿ ಮಾಹಿತಿ ಪಡೆದು ಆನ್ಲೈನ್ ನಲ್ಲಿ ದಿನಾಂಕ 30/06/2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಉತ್ತಮ ಹಸುಗಳ ಆಯ್ಕೆಯಲ್ಲಿ ಗಮನಿಸಬೇಕಾದ ಅಂಶಗಳು ಮತ್ತು ಶುದ್ಧ ಹಾಲನ್ನು ಉತ್ಪಾದಿಸುವ ವಿಧಾನ.

ಷರತ್ತು/ನಿಯಮಗಳು:

1)ಅರ್ಜಿದಾರರು 2023-24ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾದ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು.

2)ಅರ್ಜಿದಾರರು ರಾಜ್ಯದ ಕ್ರೀಡಾ ಪ್ರಾಧಿಕಾರದಲ್ಲಿನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ:01/04/2023 ರಿಂದ31/03/2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01/04/2023 ರಿಂದ31/03/2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

3)ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

4)ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಕೃಷಿ ಸಾಲ ಭಾದೆಯಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ 5 ಲಕ್ಷದವರೆಗೆ ಸಹಾಯಧನ ಪಡೆದುಕೊಳ್ಳಬಹುದು!

5)ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.

6)ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ.10000.00 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಸಲ್ಲಿಸುವ ಲಿಂಕ್ ಈ ಕೆಳಗೆ ನೀಡಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಿ ಇಲ್ಲಿ ಕ್ಲಿಕ್ ಮಾಡಿ.

ಇತ್ತೀಚಿನ ಸುದ್ದಿಗಳು

Related Articles