ನಮಸ್ಕಾರ ರೈತರೇ, ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯೋಗ(Self Employment Subsidy Yojana) ಮಾಡಲು ಅರ್ಥಿಕವಾಗಿ ನೆರವು ನೀಡಲು ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ(Kuri sakanike yojane) ಆರಂಭಿಸಲು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ(Dr. BR Ambedkar Development Corporation) ಬ್ಯಾಂಕ್ ಸಹಯೋಗದಲ್ಲಿ ಮತ್ತು ಸಹಾಯಧನ ಸೌಲಭ್ಯದೊಂದಿಗೆ ಸಾಲವನ್ನು ಪಡೆದು ಕೃಷಿಯ ಜೊತೆಗೆ ಉಪಕಸುಬಾದ ಕುರಿ ಸಾಕಾಣಿಕೆಯನ್ನು ಪ್ರಾರಂಭಿಸಲು ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿಯನ್ನು ಕರೆಯಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆಗೆ(Sheep farming subsidy loan) ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತದೆ? ಅರ್ಜಿ ಸಲ್ಲಿಸಲು ಅರ್ಹರು ಯಾರು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ.
ಇದನ್ನೂ ಓದಿ:ಮಹಿಳೆಯರ ವಸ್ತ್ರ ವಿನ್ಯಾಸ (ಮಹಿಳೆಯರ ಟೈಲರಿಂಗ್) ಉಚಿತ ತರಬೇತಿಗೆ ಅರ್ಜಿ ಆಹ್ವಾನ!
Sheep farming subsidy- ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆಗೆ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತದೆ?
ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಒಟ್ಟು 1 ಲಕ್ಷ ಬ್ಯಾಂಕ್ ಸಾಲ ಮತ್ತು ಇದಕ್ಕೆ ನಿಗಮದಿಂದ 50 ಸಾವಿರ ಸಬ್ಸಿಡಿ ನೀಡಲಾಗುತ್ತದೆ.
Self Employment Subsidy Loan Scheme Online Application-ಅರ್ಜಿ ಸಲ್ಲಿಸುವ ವಿಧಾನ:
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಸೇವಾ ಸಿಂಧು ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮದ ಕರ್ನಾಟಕ ಒನ್/ಗ್ರಾಮ ಒನ್/ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
(1) ಅರ್ಜಿದಾರರ ಆಧಾರ್ ಕಾರ್ಡಪ್ರತಿ zerox
(2) ಬ್ಯಾಂಕ್ ಅಕೌಂಟ್ zerox
(3) ಜಾತಿ ಮತ್ತು ಆದಾಯ ಪ್ರಮಾಣ zerox
(4) ಜಮೀನಿನ ಪಹಣಿ(RTC)
(5) ಪೋಟೋ
(6) ರೇಷನ್ ಕಾರ್ಡ zerox
ಇದನ್ನೂ ಓದಿ:ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲ ಪಿಎಂ ಕಿಸಾನ್ ಹಣ ಬರುತ್ತೆ ನೋಡಬೇಕೆ? ಇಲ್ಲಿದೆ ಮಾಹಿತಿ.
Who Can Apply For Self Employment Subsidy Loan Scheme- ಯಾರೆಲ್ಲ ಅರ್ಜಿ ಸಲ್ಲಿಸಬಹುದು:
1) ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಜಿದಾರರಿಗೆ 18 ವರ್ಷ ಭರ್ತಿಯಾಗಿರಬೇಕು.
2) ಅರ್ಜಿದಾರರು ನಿಗಮದಿಂದ ನಿಗದಿಪಡಿಸಿರುವ ವರ್ಗಕ್ಕೆ ಸೇರಿದವರಾಗಿರಬೇಕು(ಪರಿಶಿಷ್ಟ ಜಾತಿ).
3) ಈಗಾಗಲೇ ಈ ಯೋಜನೆಯಡಿ ಹಿಂದಿನ ವರ್ಷಗಳಲ್ಲಿ ಈ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಸಹಾಯಧನ ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಬರುವುದಿಲ್ಲ.