Friday, November 22, 2024

ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ಬದಲು ನೇರ ಡಿಬಿಟಿಗೆ ಮುಖ್ಯಮಂತ್ರಿ ಚಾಲನೆ:

ಆತ್ಮೀಯರೇ ಚುನಾವಣೆ ಮುಂಚಿತವಾಗಿ ತಮ್ಮ ಪ್ರಣಾಳಿಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ , ಕರ್ನಾಟಕದ ಜನರಿಗೆ 5 ಕೆ ಜಿ ಅಕ್ಕಿ ಜೊತೆಗೆ ಇನ್ನೂ ಅದಕ್ಕೆ ಐದು ಕೆ ಜಿ ಅಕ್ಕಿ ಸೇರಿಸಿ ಒಟ್ಟಾಗಿ ಹತ್ತು ಕೆ ಜಿ ಅಕ್ಕಿ ನೀಡುವುದಾಗಿ ಗ್ಯಾರಂಟಿ ಘೋಷಣೆ ಮಾಡಿತ್ತು. ಆದರೆ ಕಾರಣಾಂತರದಿಂದ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ತಿರ್ಮಾನಿಸಿದೆ.

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ (ಡಿಬಿಟಿ) ಮೂಲಕ ಹಣ ಪಾವತಿಸಲು ಮುಖ್ಯಮಂತ್ರಿಗಳು ಅನ್ನಭಾಗ್ಯ ಯೋಜನೆ ಪ್ರಾಯೋಗಿಕವಾಗಿ ಚಾಲನೆ ನೀಡಿರುತ್ತಾರೆ.
ಇದರಿಂದ ರಾಜ್ಯದ ಜನಸಾಮಾನ್ಯರಿಗೆ ಈ ಮೂಲಕ ಖುಷಿಯಾದ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಜನಗಳ ಖಾತೆಗೆ ವರ್ಗಾಹಿಸಲಾಗಿದೆ.

ಇದನ್ನೂ ಓದಿ:ಉಪ ವಲಯ ಅರಣ್ಯಾಧಿಕಾರಿ ಯೋಗೇಶನಾಯ್ಕ ಅವರನ್ನು ಬಲಿ ಪಡೆದ Paraquat Dichloride ಕಳೆನಾಶಕ ಅದೆಷ್ಟು ಘೋರ ವಿಷ ಗೊತ್ತ

ದಿನಾಂಕ 10/07/02023 ರಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.

ವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸಲು ಜಾರಿಗೆ ಮಾಡಲಾಗಿದೆ.

2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಆಗಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನ ಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳು

Related Articles