Friday, November 22, 2024

Student Scholarship: ಹೊಸ ಆದೇಶ,ಇನ್ನೂ ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ಪ್ರೋತ್ಸಾಯಧನ:

ಆತ್ಮೀಯ ವಿದ್ಯಾರ್ಥಿ ಮಿತ್ರರೇ ಮತ್ತು ಪೋಷಕರೇ ನೀವು ಮತ್ತು ನಿಮ್ಮ ಮನೆಯಲ್ಲಿ ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇದ್ದರೇ ಈ ಒಂದು ಯೋಜನೆಯ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಹಳೆಯ ಆದೇಶವನ್ನು ಸರ್ಕಾರ ಪರೀಷ್ಕರಿಸಿ (ಮಾರ್ಪಡಿಸಿ) ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶವನ್ನು ಸಂಪೂರ್ಣವಾಗಿ ಓದಿ ನಿಮ್ಮ ಅಕ್ಕ ಪಕ್ಕದ ವಿದ್ಯಾರ್ಥಿಗಳಿದ್ದರೆ ಅವರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ.

ಸರ್ಕಾರದ ಆದೇಶ:
ಈ ಹೊಸ ಆದೇಶದಲ್ಲಿ ಈ ರೀತಿ ವಿವರಿಸಿದೆ ಸರ್ಕಾರದ ಆದೇಶ ಸಂಖ್ಯೆ:ಸಕಇ 89 ಸಮನ್ವಯ 2013(2), ದಿನಾಂಕ: 04-09-2013 ಮತ್ತು ಸರ್ಕಾರದ ಆದೇಶ ಸಂಖ್ಯೆ:ಸಕಇ 9 ಪಕವಿ 2023 ದಿನಾಂಕ: 23-08- 2023ರ ಆದೇಶಗಳನ್ನು ರದ್ದುಪಡಿಸುತ್ತಾ, 2023- 2024ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಮೊದಲ ಹಂತದಲ್ಲಿ

ಪ್ರಥಮ ದರ್ಜೆಯಲ್ಲಿ (1st class) ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ Online ಮೂಲಕ ಅರ್ಜಿ ಪಡೆದು ಅರ್ಹ ವಿದ್ಯಾರ್ಥಿಗಳ ಆಧಾರ ಜೋಡಿಣೆ ಹೊಂದಿದ ಬ್ಯಾಂಕ್ ಖಾತೆಗಳಿಗೆ DBT ನೇರ ನಗದು ಹಣ ಪಾವತಿ ಮುಖಾಂತರ ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಸರ್ಕಾರ ತೀರ್ಮಾನಿಸಿದೆ.

ಇದನ್ನೂ ಓದಿ: International Milets and Oraganic Fair 2024″: ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ

Scholarship Details: ಪ್ರೋತ್ಸಹಧನದ ವಿವರ:
ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ತರಗತಿಯಲ್ಲಿ ಶೇ.60 ರಿಂದ ಶೇ.74.99 ಅಂಕ ಪಡೆದಲ್ಲಿ ರೂ.7000/-ಗಳನ್ನು

ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಅಥವಾ ತರಗತಿಯಲ್ಲಿ ಮತ್ತು ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.15000/- ಗಳನ್ನು ಒಂದು ಬಾರಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆದೇಶಿಸಲಾಗಿದೆ. ಅದರಂತೆ ಪಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಎಲ್ಲಾ ವಿಧ್ಯಾರ್ಥಿಗಳಿಗೂ ಯಾವುದೇ ಅದಾಯ ಮಿತಿ ನಿಗದಿಪಡಿಸ ಪ್ರತಿಯೊಬ್ಬರಿಗೂ ಪ್ರೋತ್ಸಾಹಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಮುಂದುವರದು, ಮೇಲೆ ಓದಲಾದ ಕ್ರಮಾಂಕ (2)ರ ಆದೇಶದಲ್ಲಿ ಯಾವುದೇ ಅದಾಯ ಮಿತಿ ನಿಗದಿಪಡಿಸದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಭಾರಿಗೆ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಲ್ಲಾ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ Online ಮೂಲಕ ಅರ್ಜಿ ಪಡೆದು ವಿದ್ಯಾರ್ಥಿಗಳ ಆಧಾ ಜೋಡಿತ ಬ್ಯಾಂಕ್ ಖಾತೆಗಳಿಗೆ DBT ಮುಖಾಂತರ ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಮಾರ್ಗಸೂಚಿಯನುಸಾರ ಈ ಕೆಳಗಿನಂತೆ ಕೋರ್ಸುಗಳನ್ನು ವಿಂಗಡಣೆ ಮಾಡಿದೆ.

ಇದನ್ನೂ ಓದಿ: Irrigation Facility Subsidy: ಕೃಷಿ ಕ್ಷೇತ್ರದ ನೀರಾವರಿ ಸೌಲಭ್ಯಕ್ಕೆ 75,000/- ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ:

Eligibility Of Students: ವಿದ್ಯಾರ್ಥಿಗಳಿಗಿರಬೇಕಾದ ಅರ್ಹತೆ ಈ ಕೆಳಗೆ ನೀಡಲಾಗಿದೆ:
ಈ ಕೆಳಕಂಡಂತೆ ಕೋರ್ಸುಗಳನ್ನು ವಿಂಗಡಣೆ ಮಾಡಿ, ಪ್ರತಿಯೊಂದು ಕೋರ್ಸಿನಲ್ಲೂ ವಿದ್ಯಾರ್ಥಿಗಳು – ಪ್ರೋತ್ಸಾಹಧನ ಯೋಜನೆಗೆ ಪಡೆಯಬೇಕಾದ ಕನಿಷ್ಠ ಅಂಕಗಳು, ಅರ್ಜಿ ಸಲ್ಲಿಸಲು ಗರಿಷ್ಠ ಆದಾಯ ಮಿತಿ, ವಿದ್ಯಾರ್ಥಿಗಳಿಗಿರಬೇಕಾದ ಅರ್ಹತೆ ಹಾಗೂ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಆದೇಶ ಪ್ರತಿ ಓದಲು ಇಲ್ಲಿ ಓತ್ತಿ( Order copy)

ಪಿ.ಯು.ಸಿ/12th/ITI ಪರೀಕ್ಷೆಗಳ ಸಂಬಂಧ ಪ್ರಥಮ ಪ್ರಯತ್ನದಲ್ಲಿ ಶೇ.75 ಹಾಗೂ ಅದಕ್ಕಿಂತ ಹೆಚ್ಚಿನ ಪ್ರಥಮ ದರ್ಜೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು.

ಹಾಗೂ ಉಳಿದ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪಬ್ಲಿಕ್ ಪರೀಕ್ಷೆ ಇದ್ದಲ್ಲಿ ಪ್ರತಿ ವರ್ಷವೂ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕಾಗಿರುತ್ತೆ, ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸುಗಳಿಗೆ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು.

ಯಾವುದೇ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆcompartmental / carry‬‎ over system, ಇದ್ದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಮೇಲ್ಕಂಡ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಪಡೆಯಲು ಅರ್ಹರಲ್ಲ. ರಾಜ್ಯ / ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಯು.ಜಿ.ಸಿಯಿಂದ ಮಾನ್ಯತೆ ಪಡೆದ ಡೀಮ್ಸ್ ವಿಶ್ವವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ (Autonomous) are Karnataka State Open University, Mysuru ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಿರುತ್ತಾರೆ.

ಮುಖ್ಯವಾಗಿ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಈ ಯೋಜನೆಗೆ ಅರ್ಹತೆ ಪಡೆದಿರುತ್ತಾರೆ.

KSOU ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಯೋಜನೆಗೆ ಅರ್ಹರಿರುತ್ತಾರೆ. KSOU ಹೊರತುಪಡಿಸಿ, ಹೊರರಾಜ್ಯದ ಮುಕ್ತ ವಿಶ್ವವಿದ್ಯಾಲಯಗಳ ಮೂಲಕ ಪದವಿ ಪಡೆದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.

ITI ಕೋರ್ಸ್ ಸಂಬಂಧ, ಕಡ್ಡಾಯವಾಗಿ SSLC ನಂತರದಲ್ಲಿ ಯಾವುದೇ Year Gap ಇಲ್ಲದೇ 3 ವರ್ಷದ ITI ಗೆ ಸೇರಿ, ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. PUC ನಂತರದಲ್ಲಿ ITI ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.

Diploma in Polytechnic ಮತ್ತು SSLC Year ” Gap a 3 Diploma in Polytechnic & ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. PUC ನಂತರದಲ್ಲಿ Diploma in Polytechnic ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.

ಇದನ್ನೂ ಓದಿ: Agricultural innovation Scheme: ಕೃಷಿ ನವೋದ್ಯಮ ಯೋಜನೆಯಡಿ 5 ಲಕ್ಷದಿಂದ 50 ಲಕ್ಷದವರೆಗೆ ಸಹಾಯಧನ.

ವಿದ್ಯಾರ್ಥಿಗಳ ವಯಸ್ಸಿನ ಮಿತಿ:
ಸದರಿ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಿರಬಾರದು.

ಯಾವುದೇ ವರ್ಷದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರೆ ಅನಿಯಂತ್ರಿತ ಕಾರಣಗಳಿಂದಾಗಿ, ಪರೀಕ್ಷೆ ರದ್ದುಪಡಿಸಿ ಕೇವಲ ತರಗತಿ ಅಂಕಗಳ ಆಧಾರದ ಮೇಲೆ ಅಂತಿಮ ವರ್ಷದಲ್ಲಿ ತೇರ್ಗಡ ಎಂದು ಘೋಷಿಸಿದ್ದರೆ, ಅಂತಹ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕೆ ಅರ್ಹತೆ ಪಡೆದಿರುವುದಿಲ್ಲ.

ಗಮನಿಸಿ: ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸದರಿ ಯೋಜನೆಯಡಿ ಅರ್ಹರಿರುವುದಿಲ್ಲ.

ಇದನ್ನೂ ಓದಿ: Livestock Transport permit : ಜಾನುವಾರು ಸಾಗಾಣಿಕೆ ಇ-ಪರವಾನಿಗೆ ಕಡ್ಡಾಯ:

ಅರ್ಜಿ ಸಲ್ಲಿಸಲು ಹತ್ತಿರದ ಕರ್ನಾಟಕ ಓನ್, ಗ್ರಾಮ ಒನ್, ನಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿಬಹುದಾಗಿದೆ.

ಇತ್ತೀಚಿನ ಸುದ್ದಿಗಳು

Related Articles