Thursday, September 19, 2024

Transport Department: ಎಲ್ಲಾ ರೀತಿಯ ವಾಹನ ಮಾಲಿಕರೇ ಈ ಸುದ್ದಿ ತಿಳಿಯಿರಿ:

Transport Department: ಎಲ್ಲಾ ರೀತಿಯ ವಾಹನ ಮಾಲಿಕರೇ ಈ ಸುದ್ದಿ ತಿಳಿಯಿರಿ:
1 ಸಾವಿರ ರು.ನಿಂದ 2 ಸಾವಿರ ರು.ವರೆಗೆ ದಂಡ ವಿಧಿಸುವ ಸಾಧ್ಯತೆಗಳಿವೆ.

ಆತ್ಮೀಯ ರಾಜ್ಯದ ವಾಹನ ಚಾಲಕರೇ ಹಾಗೂ ವಾಹನ ಮಾಲಿಕರೇ ದಯವಿಟ್ಟು ಈ ಮಾಹಿತಿಯನ್ನು ಅರಿತುಕೊಳ್ಳಿ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಸಂಖ್ಯೆ ಟಿಡಿ 193 ಇವಿಒ 2021 17-08-2023 ಹಾಗೂ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ರವರ ಸುತ್ತೋಲೆ ಸಂಖ್ಯೆ : ಸಾಆ/ನೋಂ-1/30-434/2022-23, ದಿನಾಂಕ: 18-08-2023 ಪ್ರಕಾರ, ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ

ಹಳೆಯ ಎಲ್ಲಾ ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ. ಆದೇಶ ಹೊರಡಿಸಿರುತ್ತದೆ.

ಇದನ್ನೂ ಓದಿ: Crop insurance application Rejected : ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಕಂಪನಿಯಿಂದ ತಿರಸ್ಕ್ರತಗೊಂಡ ರೈತರ ಪಟ್ಟಿ!!

ಹಾಗಿದ್ದರೇ ಈ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಅನುಸರಿಸಲು ವಿಧಾನ ಬಗ್ಗೆ ತಿಳಿಯೋಣ.

ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಕಾರ್ಯವಿಧಾನ

https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತು Book HSRP ನ್ನು ಕ್ಲಿಕ್ ಮಾಡಿ.

ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲ‌ರ್ ಸ್ಥಳವನ್ನು ಆಯ್ಕೆಮಾಡಿ.

HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ರವಾನಿಸಲಾಗುವುದು.

ಇದನ್ನೂ ಓದಿ: Drought relief Grant district wise: ಯಾವ ಜಿಲ್ಲೆಗೆ ಎಷ್ಟು ಬರ ಪರಿಹಾರ ಹಣ? ಯಾರಿಗೆ ಜಮಾ ?

ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದರ ಬಗ್ಗೆ ಪ್ರಮುಖ ಅಂಶಗಳು

https://transport.karnataka.gov.in . ಅಥವಾ www.siam.in ಮೂಲಕ ಮಾತ್ರ , HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.

ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬ‌ರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.

ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಅಳವಡಿಕೆಗೆ ದಿನಾಂಕ: 17-11-2023 ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಸರ್ಕಾರದ ಅಧಿಸೂಚನೆ ಟಿಡಿ . 193 ಟಡಿಪಿ 2021, ದಿನಾಂಕ 16-11-2023 ದಿನಾಂಕ : 17-02-2024 ವಿಸ್ತರಿಸಲಾಗಿರುತ್ತದೆ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9449863429, 9449863426

ಇದನ್ನೂ ಓದಿ: RRB Recruitment 2024: ಸುಮಾರು 9000 ತಂತ್ರಜ್ಞರ ನೇಮಕಾತಿಗೆ

ರಾಜ್ಯದ ವಾಹನಗಳಿಗೆ ಅತೀ ಸುರಕ್ಷತಾ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿದ್ದ ಗಡುವು ಇನ್ನೊಂದು ವಾರದಲ್ಲಿ ಪೂರ್ಣಗೊಳ್ಳಲಿದ್ದು, ಈವರೆಗೆ ಶೇ.10ಕ್ಕಿಂತ ಕಡಿಮೆ ವಾಹನಗಳ ಮಾಲೀಕರು ಎಚ್‌.ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದಾರೆ.

ಏಕರೂಪ ನೋಂದಣಿ ಫಲಕ ಅಳವಡಿಕೆ ಹಾಗೂ ವಾಹನಗಳ ಸುರಕ್ಷತೆ ಮತ್ತು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಲುವಾಗಿ ವಾಹನಗಳಿಗೆ ಎಚ್.ಎಸ್ ಆ‌ರ್.ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. 2019ರ ಏಪ್ರಿಲ್ ನಂತರ ನೋಂದಣಿಯಾದ ಎಲ್ಲವಾಹನಗಳಿಗೂ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ. ಆದರೆ, ಅದಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳು ಎಚ್‌ಎಸ್ ಆರ್.ಪಿ ಅಳವಡಿಸಿಕೊಂಡಿಲ್ಲ. ಹೀಗಾಗಿ 2019ರ ಏಪ್ರಿಲ್ ಗಿಂತ ಮುಂಚೆ ನೋಂದಣಿಯಾದ ವಾಹನಗಳು ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಆದೇಶಿಸಿತ್ತು. ಅಲ್ಲದೆ, ಎಚ್‌ಎಸ್ ಅಪಿ ಅಳವಡಿಕೆಗೆ 2023ರ ನ. 17ನ್ನು ಅಂತಿಮ ದಿನವಾಗಿಸಲಾಗಿತ್ತು.

ಸಾರಿಗೆ ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ 2 ಕೋಟಿಗೂ ಹೆಚ್ಚಿನ ವಾಹನಗಳು ಎಚ್‌.ಎಸ್‌ಆರ್‌ಪಿ ಆಳವಡಿಸಿಕೊಳ್ಳಬೇಕಿದ್ದು, 2023ರ ನ. 17ರವರೆಗೆ ಕೇವಲ 40 ಸಾವಿರ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡಿಕೊಂಡಿದ್ದವು. ಹೀಗಾಗಿ ಎಚ್‌.ಎಸ್. ಆರ್.ಪಿ ಅಳವಡಿಕೆ ಅಂತಿಮ ದಿನವನ್ನು 2024ರ ಫೆ. 17ಕ್ಕೆ ವಿಸ್ತರಿಸಲಾಗಿತ್ತು. ಹೀಗೆ ಎರಡನೇ ಬಾರಿ ಗಡುವು ವಿಸ್ತರಿಸಿದರೂ ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಆಳವಡಿಕೆ ಮುಂದಾಗಿಲ್ಲ. ಈವರೆಗೆ ಶೇ. 10ಕ್ಕಿಂತ ಕಡಿಮೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆ ನೀಡಲಾಗಿದ್ದ ಗಡುವು ಇನ್ನೊಂದು ವಾರದಲ್ಲಿ ಮುಗಿಯಲಿದೆ. ಆದರೆ, ನಿಗದಿಯಷ್ಟು ವಾಹನಗಳು ಎಚ್‌.ಎಸ್ ಆರ್‌ಪಿ ಅಳವಡಿಕೆ ಮಾಡಿಕೊಂಡಿಲ್ಲದ ಕಾರಣ ಮತ್ತೊಮ್ಮೆ ಗಡುವು ವಿಸ್ತರಿಸಬಹುದೇ ಎಂಬ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ. ಒಂದು ವೇಳೆ ಗಡುವು ವಿಸ್ತರಿಸದಿದ್ದರೆ ಫೆ. 18ರಿಂದ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ವಾಹನಗಳಿಗೆ 1 ಸಾವಿರ ರು.ನಿಂದ 2 ಸಾವಿರ ರು.ವರೆಗೆ ದಂಡ ವಿಧಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ: PM- Kisan 16th installment: ಪಿ ಎಂ ಕಿಸಾನ್ 16 ನೇ ಕಂತಿನ ಹಣಕ್ಕೆ ಈ ಪ್ರಕ್ರಿಯೆ ಕಡ್ಡಾಯ!!!

ಇತ್ತೀಚಿನ ಸುದ್ದಿಗಳು

Related Articles