Friday, September 20, 2024

ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸಿ ಎಂ ಬೊಮ್ಮಾಯಿ

ಬೆಂಗಳೂರು: ಏಪ್ರಿಲ್ 1 ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೀಲ್ವೋ ಮಲ್ಟಿ ಎಕ್ಸೆಲ್ ಬಿಎಸ್ 4-9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.


ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕಾವಾಗಿ ಸ್ವಾಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ಗಳನ್ನು ಪರಿಚಯಿಸಬೇಕು. ಇರುವ ಬಸ್ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂಧರ್ಭದಲ್ಲಿ ಪ್ರತಿ ತಾಲೂಕ್ಕಿನಲ್ಲಿ ಕನಿಷ್ಠ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದರು.


ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಈ ಬಾರಿಯ ಬಜೆಟ್ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ. ಜನರಿಗೆ ಉತ್ತಮ ಸೇವೆ ಒದಗಿಸೋಣ ಎಂದರು.

ಸಂಚಾರದ ಹೊಸ ಪಡೆ:
ಹೊಸ ಸಂಚಾರದ ವಿಶೇಷ ಒಂದು ಪಡೆ ಅಂಬಾರಿಯನ್ನು ಇಂದು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ ಸ್ಲೀಪರ್ ವ್ಯವಸ್ಥೆ ಇದೆ. ದೂರ ಪ್ರಯಾಣಕ್ಕೆ ಅಗತ್ಯವಿರುವ ರೇಲ್ವೆ ಮಾದರಿಯಲ್ಲಿವುದಕ್ಕಿಂತ ಉತ್ತಮವಾದ ವ್ಯವಸ್ಥೆ ಕಲ್ಪಿಸಲಾಗಿದೆ. ಹಿಂದೆ ವೋಲ್ವೋ ಬಸ್ ಗಳು ಹೆಚ್ಚು ಅನುಕೂಲಕರವಾಗಿರಲಿಲ್ಲ ಹಿಂದಿನ ಸಮಸ್ಯೆಗಳನ್ನು ಅರಿತು ಈ ಬಸ್ಗಳಲ್ಲಿ ಮಲ್ಟಿ ಎಕ್ಸೆಲ್ ವ್ಯವಸ್ಥೆ ಕಲ್ಪಿಸಿ, ಉತ್ತಮ ವ್ಯವಸ್ಥೆ ರೂಪಿಸಲಾಗಿದೆ. ಸುಲಭವಾಗಿ ಸುಖವಾಗಿ ರಾತ್ರಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯ ಸಾರಿಗೆಗೆ ಇನ್ನಷ್ಟು ಬಸ್ಸುಗಳನ್ನು ಪಡೆದುಕೊಳ್ಳುವುದು ಸುಕ್ತ ಎಂದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ 2023 ಪ್ರಮುಖ ಅಂಶಗಳು ಬಗ್ಗೆ ತಿಳಿಯೋಣ.

ಲಾಭದಾಯಕವಾಗಿರುವ ನಿಟ್ಟಿನಲ್ಲಿ ಯೋಜನೆ ಅಗತ್ಯ ಕೆ.ಎಸ್.ಆರ್.ಟಿ.ಸಿ. ತನ್ನದೇ ಇತಿಹಾಸವನ್ನು ಹೊಂದಿದ್ದು, ಉತ್ತಮ ಸೇವೆಯನ್ನು ಒದಗಿಸುತ್ತಿದೆ. ಕೆಂಪ್ ಬಸ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಆಗ ಡ್ರೈವರ್ ಮತ್ತು ಸಾರ್ವಜನಿಕರ ನಡುವೆ ಉತ್ತಮ ಭಾಂದವ್ಯ ಇತ್ತು. ಗ್ರಾಮೀಣ ಜನರು ತಮ್ಮ ಪ್ರಯಾಣವನ್ನು ಕೆ.ಎಸ್.ಆರ್.ಟಿ.ಸಿ. ಬಸ್ಗಳ ಮೂಲಕವೇ ಗುರುತಿಸಿಕೊಳ್ಳುತ್ತಾರೆ. ಇಂಥ ಸೇವೆಯು ಖಾಸಗೀಕರಣದಿಂದ ಪೈಪೋಟಿ ಎದುರಿಸುತ್ತಿದೆ. ಖಾಸಗಿಯವರು ಲಾಭದಾಯಕ ಮಾರ್ಗಗಳಲ್ಲಿ ಮಾತ್ರ ಸಂಚಾರ ನಡೆಸುತ್ತಾರೆ. ಸಾಮಾಜಿಕವಾಗಿ ಕೆಲಸ ಮಾಡುವ ಮಾರ್ಗಗಳನ್ನು ಕರಾರಸಾನಿಕ್ಕೆ ಬಿಡುತ್ತಾರೆ. ನಾವು ಸೇವಾ ವಲಯದಲ್ಲಿಯೂ ಹಾಗೂ ವಾಣಿಜ್ಯ ವರ್ಗಗಳಲ್ಲಿಯು ಸಂಚರಿಸಿ ನಿಗಮವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಸಂಚಾರ ಮಾಡಬೆಕಾಗುತ್ತದೆ ಎಂದರು.

ಸೋರಿಕೆ ತಡೆಗಟ್ಟಿ ಆದಾಯ ಹೆಚ್ಚಿಸಿ:
ಬರುವ ದಿನಗಳಲ್ಲಿ ನಿಗಮ ಬಹಳ ದೊಡ್ಡ ಬದಲಾವಣೆಗಳನ್ನು ಕಾಣುವ ವಿಶ್ವಾಸವಿದೆ. ತನ್ನದೇ ಶಕ್ತಿಯ ಮೇಲೆ ನಿಲ್ಲಬೇಕೆನ್ನುವುದು ನಮ್ಮ ಅಭಿಲಾಷೆ. ಹಿಂದೆ ಇದ್ದಂತೆಯೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರ ಕೋವಿಡ್ ಹಾಗು ನಂತರದಲ್ಲಿ ಎಲ್ಲಾ ರಂಗಗಳಲ್ಲಿ ಕುಸಿತ ಕಂಡಿತ್ತು. ಈ ಸಂದರ್ಭದಲ್ಲಿ ಕರಾರಸಾನಿ ಸಂಸ್ಥೆ ಸಾಕಸ್ಟು ತೊಂದರೆ ಅನುಭವಿಸಿದೆ. ಆ ಸಂದರ್ಭದಲ್ಲಿ ಸರ್ಕಾರ ಸಂಪೂರ್ಣವಾಗಿ ಹಣಕಾಸಿನ ಬೆಂಬಲ ನೀಡಿದೆ 2 ವರ್ಷವೂ ಬೆಂಬಲ ನೀಡಿ ನೌಕರರಿಗೆ ವೇತನ ಡಿಸೆಲ್ ಬಿಲ್ ಗೆ ಅನುದಾನ ಒದಗಿಸಲಾಗಿದೆ ನಷ್ಟದಲ್ಲಿದ ಸಾರಿಗೆ ನಿಗಮಗಳಿಗೆ 4600/- ಕೋಟಿ ರೂ. ನೀರಲಾಗಿದೆ. ಇತ್ತೀಚೆಗೆ ಒಂದು ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲು ಸಿದ್ದವಿದ್ದು ತೆರಿಗೆ ವಿನಾಯತಿ ನೀಡಲು ಕೂಡ ಸಿದ್ದವಿದೆ. ನಿಗಮಗಳು ವಾಣಿಜ್ಯ ಮಾರ್ಗಗಳ ಸಂಚಾರ ಹಾಗೂ ಸೋರಿಕೆ ತಡೆಯುವ ಮೂಲಕ ಆದಾಯ ಹೆ್ಚಳಕ್ಕೆ ಪ್ರಯತ್ನ ಪಡಬೇಕು. ಖರೀಯಲ್ಲಿನ ಪಾರದರ್ಶಕತೆ ತರಬೇಕು. ಬಿಡಿ ಬಾಗ, ಆಯಿಲ್, ಟಾಯರ್. ಖರೀದಿಯಲ್ಲಿ ಪಾರದರ್ಶಕತೆ ತಂದು ವೆಚ್ಚವನ್ನು ಕಡಿಮೆ ಮಾಡಬೇಕು. ಸಾರಿಗೆ ಸಂಸ್ಥೆಯನ್ನು ಮತ್ತೊಮ್ಮೆ ಲಾಭದಾಯಕವಾಗಿ ನಡೆಸಬೇಕು ಎಂಬ ಅಭಿಲಾಷೆಗೆ ಎಲ್ಲರೂ ಸಹಕರಿಸಬೇಕು ಎಂದರು.

ಇತ್ತೀಚಿನ ಸುದ್ದಿಗಳು

Related Articles