ಇಂದಿನ ಹವಾಮಾನ ಇಲಾಖೆ ವರದಿ ಪ್ರಕಾರ ಬಹುತೇಕ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ನಿನ್ನೆ ಮಳೆ ಸ್ವಲ್ಪ ಕಡಿಮೆ ಆಗಿತ್ತು. ಹೊನ್ನಾವರ ಕಾಸರಗೋಡು ಸುಳ್ಯ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು ಬಿಜಾಪುರ ಬೆಳಗಾವಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದೆ.
ಕರಾವಳಿ ಜಿಲ್ಲೆಗಳ ಹವಾಮಾನ ಮುನ್ಸೂಚನೆ.:
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಹಗಲು ಮೋಡ- ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. ಇವತ್ತು ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಮಳೆ ಹಾಗೂ ದ.ಕ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉ.ಕ ದ ಕರಾವಳಿ ತೀರಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ. ಸಂಜೆಯ ನಂತರ ರಾತ್ರಿಯೂ ಮಳೆಯಾಗಬಹುದು. ನಾಳೆಯಿಂದ ಮತ್ತೆ ನಿರಂತರ ಮಳೆ ಆರಂಭವಾಗುವ ಮುನ್ಸೂಚನೆ ಇದೆ.ಜುಲೈ 21 ನಂತರವೂ ಸಾಧಾರಣ ಮಳೆ ಮುಂದುವರೆಯಲಿದ್ದು ಜುಲೈ ತಿಂಗಳಿನಲ್ಲಿ ಉತ್ತಮ ಮಳೆ ರಹಿತ ಬಿಸಿಲಿನ ದಿನ ಬರುವ ಸಾಧ್ಯತೆ ಕಡಿಮೆಯಾಗುತ್ತಿದೆ.
ಮಲೆನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ.:
ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಮಳೆ ಪ್ರಮಾಣ ಜಾಸ್ತಿ ಇರಬಹುದು. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯಾಗಬಹುದು. ಮಲೆನಾಡಿನಲ್ಲಿ ಇನ್ನೊಂದು ವಾರ ನಿರಂತರ ತುಂತುರು ಅಥವಾ ಆಗಾಗ ಸಾಧಾರಣ ಮಳೆ ಮುಂದುವರೆಯಬಹುದು.
ದಕ್ಷಿಣ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ.
ದಕ್ಷಿಣ ಒಳನಾಡಿನ ಮೈಸೂರು ಚಾಮರಾಜನಗರ ಮಂಡ್ಯ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ತುಮಕೂರು ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಇವತ್ತು ಸಾಧಾರಣ ಮಳೆ ಮುನ್ಸೂಚನೆ ಇದೆ. ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಬಹುದು.ಈ ಜಿಲ್ಲೆಗಳಲ್ಲಿ ಜುಲೈ 22 ರಿಂದ ಮಳೆ ಕಡಿಮೆ ಆಗಬಹುದು.
ಇದನ್ನೂ ಓದಿ: ಯೂರಿಯಾ ಅತೀ ಹೆಚ್ಚು ಬಳಕೆ ಮಾಡುತ್ತಿರಾ? ಆಗಿದ್ದರೆ ಈ ಮಾಹಿತಿ ನೋಡಿ!!
ಉತ್ತರ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ.
ಉತ್ತರ ಒಳನಾಡಿನ ರಾಯಚೂರು ಯಾದಗಿರಿ ಕಲ್ಬುರ್ಗಿ ಬೀದರ್ ಕೊಪ್ಪಳ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಗದಗ ಹಾವೇರಿ ಬಾಗಲಕೋಟೆ ಬಿಜಾಪುರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುನ್ಸೂಚನೆ ಇರಲಿದ್ದು ನಿನ್ನೆಯಂತೆ ಪೂರ್ವದ ಮೋಡ ಬಂದರೇ ಅಲ್ಲಲ್ಲಿ ಉತ್ತಮ ಮಳೆಯಾಗಬಹುದು.
ಕೇರಳ ಕರ್ನಾಟಕದ ಕರಾವಳಿ ತೀರದಲ್ಲಿ ಸಾಧಾರಣ ಮುಂಗಾರು ಮಳೆ ಮುಂದಿನ 10 ದಿನ ಮುಂದುವರೆಯಲಿದ್ದು ಒಳನಾಡು ಜಿಲ್ಲೆಗಳಲ್ಲಿ ಪೂರ್ವದ ಗಾಳಿಯ ಪ್ರಭಾವದಿಂದ ಮುಂದಿನ 4 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Free Computer Training-2025: ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ:
ಮಾಹಿತಿ .
ರಘುರಾಮ ಕಂಪದಕೋಡಿ