Monday, September 16, 2024

Yashaswini card – ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಇನ್ನೂ 10 ದಿನ ಮಾತ್ರ ಅವಕಾಶ!

ರಾಜ್ಯದ ಜನಪ್ರಿಯ ಆರೋಗ್ಯ ವಿಮೆ ಯೋಜನೆಯಾದ ಯಶಸ್ವಿನಿ ಯೋಜನೆಯಡಿ ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಇನ್ನೂ 10 ದಿನ ಮಾತ್ರ ಅವಕಾಶವಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

2023-24ನೇ ಸಾಲಿಗೆ ಸಹಕಾರಿ ಸಂಘದ ಸದಸ್ಯರುಗಳಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ(Yashaswini health insurance scheme) ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-01-2024 ರಿಂದ ದಿನಾಂಕ: 28-02-2024 ರವರೆಗೆ ಈ ಹಿಂದೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ: Milk Incentive-2024: ಹಾಲಿನ ಪ್ರೋತ್ಸಾಹ ಧನ ಅಕೌಂಟ್ ಗೆ ಜಮಾ ಅಗಿರುವುದನ್ನು ಹೇಗೆ ಚೆಕ್ ಮಾಡುವುದು?

ಯಶಸ್ವಿನಿ ಯೋಜನೆಯು(Yashaswini health insurance) ಒಂದು ಜನಪ್ರಿಯ ಯೋಜನೆಯಾಗಿದ್ದು ಈ ಯೋಜನೆಯು ಹೆಚ್ಚಿನ ಸಂಖ್ಯೆಯ ಸಹಕಾರಿ ಸಂಘದ ಸದಸ್ಯರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿನಾಂಕ: 31-03-2024 ರವರೆಗೆ ವಿಸ್ತರಿಸುವಂತೆ ಹೆಚ್ಚು ಮನವಿಗಳು ಬಂದ ಕಾರಣ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಕೊನೆಯೆ ದಿನಾಂಕವನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಅದ್ದರಿಂದ ಯಶಸ್ವಿನಿ ಯೋಜನೆಯಡಿ(Yashaswini card) ಸೌಲಭ್ಯಗಳನ್ನು ಪಡೆಯಲು ಸಹಕಾರಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸದಸ್ಯತ್ವ ನೋಂದಣಿ ಅವಧಿಯನ್ನು ಈ ಹಿಂದೆ ಇದ್ದ ಕೊನೆಯ ದಿನಾಂಕ: 29-02-2024 ರ ಬದಲಿಗೆ ದಿನಾಂಕ: 31-03-2024 ರವರೆಗೆ ವಿಸ್ತರಿಸಲು ಸಹಕಾರ ಇಲಾಖೆಯಿಂದ ತೀರ್ಮಾನಿಸಿ ನೂತನ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Crop insurence Questions and Answers: ಬೆಳೆ ವಿಮೆ ಕುರಿತು ರೈತರಿಗೆ ಅನುಮಾನಗಳಿಗೆ ತೆರೆ ನೀಡಿದ ಇಲಾಖೆ: PMFBY: ರೈತರ ಹಲವು ಪ್ರಶ್ನೆಗಳಿಗೆ ಉತ್ತರಗಳು ಈ ಲೇಖನದಲ್ಲಿ

Yashaswini yojana last date- ಯಶಸ್ವಿನಿ ಯೋಜನೆಯಡಿ ಹೊಸ ಸದಸ್ಯರ ನೋಂದಣಿ ಮತ್ತು ಹಾಲಿ ಸದಸ್ಯರ ನವೀಕರಣಕ್ಕೆ ಅರ್ಜಿ ಸಲ್ಲಿಸಲು 31 ಮಾರ್ಚ 2024 ಕೊನೆಯ ದಿನಾಂಕವಾಗಿರುತ್ತದೆ.

yashaswini application fee- ಅರ್ಜಿ ವಂತಿಕೆ ವಿವರ:

1) ಸಾಮನ್ಯ ವರ್ಗ: 1) ನಗರವಾಸಿ-1000 ರೂ
(ಕುಟುಂಬದ 4 ಸದಸ್ಯರಿಗೆ 1000 ರೂ. ಹೆಚ್ಚುವರಿ ಸದಸ್ಯರಿಗೆ ರೂ 200 ಪಾವತಿ ಮಾಡಬೇಕು)

2) ಗ್ರಾಮಾಂತರ-500 ರೂ , ಪರಿಶಿಷ್ಟ ಜಾತಿ/ಪಂಗಡದ ಸದಸ್ಯರಿಗೆ ಶುಲ್ಕ ಇರುವುದಿಲ್ಲ.
(4 ಸದಸ್ಯರಿಗೆ 500 ರೂ. ಹೆಚ್ಚುವರಿ ಸದಸ್ಯರಿಗೆ 100 ರೂ)

How to apply for yashaswini yojana- ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ಅರ್ಜಿದಾರರು ನಿಮ್ಮ ಅಗತ್ಯ ದಾಖಲಾತಿ ಸಮೇತ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ(ಸೊಸೈಟಿ) ಶಾಖೆ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಬರ ಪರಿಹಾರ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

Required documents for yashaswini scheme- ಸಲ್ಲಿಸಬೇಕಾದ ದಾಖಲಾತಿಗಳು:

1) ರೇಷನ್ ಕಾರ್ಡ ಪ್ರತಿ

2) ಪ್ರತಿ ಸದಸ್ಯರ ಆಧಾರ್ ಕಾರ್ಡ್

3) ಪ್ರತಿಯೊಬ್ಬರ ಎರಡು ಫೋಟೋ

4) ಪರಿಶಿಷ್ಟ ಜಾತಿ/ಪಂಗಡದ ಸದಸ್ಯರು ಕುಟುಂಬದ ಪ್ರತಿಯೊಬ್ಬರ ಆರ್ ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.

Yashaswini scheme benefits- ಯಶಸ್ವಿನಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಯಾವೆಲ್ಲ ಪ್ರಯೋಜನ ಪಡೆಯಬಹುದು?

ಈ ಯೋಜನೆಯಡಿ ಅರ್ಜಿ ಸಲ್ಲಿಸಿ ನೋಂದಾವಣೆ ಮಾಡಿಕೊಳ್ಳುವ ಕುಟುಂಬಕ್ಕೆ ಆರೋಗ್ಯ ಸಂಬಂಧಿತ ಸೇವೆಗಳಿಗೆ ನಗದು ರಹಿತ ಅರ್ಥಿಕವಾಗಿ ಸರಕಾರದಿಂದ ನೆರವು ನೀಡಲಾಗುತ್ತದೆ.

1) ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕಿಯ ಚಿಕಿತ್ಸಾ ವೆಚ್ಚದ ಗರಿಷ್ಠ ರೂ. 5.00 ಲಕ್ಷದವರೆಗೆ ನಗದು ರಚಿತ ಅರ್ಥಿಕ ನೆರವು ನೀಡಲಾಗುತ್ತದೆ. ರಾಜ್ಯದ ಯಾವುದೇ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ.

ಇದನ್ನೂ ಓದಿ: Crop insurance 2024: ಬಾಕಿ 800 ಕೋಟಿ ಬೆಳೆವಿಮೆ ಪರಿಹಾರ ಮಾರ್ಚ ಅಂತ್ಯಕ್ಕೆ ಬಿಡುಗಡೆ:

2) ಯಶಸ್ವಿನಿ ಯೋಜನೆಯಡಿಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು ಹಾಗೂ ಈ ಯೋಜನೆಯಡಿ ಇತರೆ ಅನುಸೂಚಿತ ಸಾಮಾನ್ಯ ರೋಗಿಗಳಿಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಪಡೆಯಬಹುದು.

3) ಪ್ರಾರಂಭೀಕವಾಗಿ ಆಯುಷ್ಮಾನ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಅಳವಡಿಸಿಕೊಂಡಿರುವ 1650 ಖಾಯಿಲೆಗಳಿಗೆ ಚಿಕಿತ್ಸೆಗಳನ್ನು ಯಶಸ್ವಿನಿ ಯೋಜನೆಯಲ್ಲಿ ಅವಕಾಶವಿರುತ್ತದೆ.

4) ಯಶಸ್ವಿನಿ ಸದಸ್ಯರು ಜನರಲ್ ವಾರ್ಡಿನಲ್ಲಿ ಸೌಲಭ್ಯ ಪಡೆಯುವಲ್ಲಿ ಅರ್ಹತೆ ಹೊಂದಿರುತ್ತಾರೆ. ಯಶಸ್ವಿನಿ ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಯಲ್ಲಿ ಒದಗಿಸಿರುವ ಚಿಕಿತ್ಸಾ ಸೌಲಭ್ಯದಲ್ಲಿ ಔಷಧಿ ವೆಚ್ಚ, ಆಸ್ಪತ್ರೆ ವೆಚ್ಚ, ಶಸ್ತ್ರ ಚಿಕಿತ್ಸೆಯ ವೆಚ್ಚ, ಆಪರೇಷನ್ ಥಿಯೇಟರ್ ಬಾಡಿಗೆ, ಅರವಳಿಕೆ ತಾರ ಫೀ, ಕನ್ಸಲ್ಟಂಟ್ ಫೀ, ಬೆಡ್ ಚಾರ್ಜ್. ನರ್ಸ್ ಫೀ ಇತ್ಯಾದಿ ವೆಚ್ಚ ಒಳಗೊಂಡಿರುತ್ತದೆ.

5) ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ವಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ. 200/- ಗಳ (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ನೆಟ್ ವರ್ಕ್ ಆಸ್ಪತ್ರೆಗಳು ಇದಕ್ಕಿಂತ ಹೆಚ್ಚಿನ ಶುಲ್ಕವನ್ನು ಸದಸ್ಯರಿಗೆ ವಿಧಿಸತಕ್ಕದ್ದಲ್ಲ. ಈ ಪೈಕಿ ರೂ. 100/-ಗಳನ್ನು ಯಶಸ್ವಿನಿ ಟ್ರಸ್ಟ್ ನ ವತಿಯಿಂದ ಪಾವತಿಸಲಾಗುತ್ತದೆ.

ಇದನ್ನೂ ಓದಿ: MSP Price 2024: 1.00 ಲಕ್ಷ ಮೆಟ್ರಿಕ್ ಟನ್, ಬೆಂಬಲ ಬೆಲೆಯಲ್ಲಿ ಜೋಳ ಖರೀದಿ:
ಯಾವ ಜೋಳಕ್ಕೆ ಎಷ್ಟು ದರ ನಿಗಧಿ? ಒಬ್ಬ ರೈತನಿಂದ ಎಷ್ಟು ಖರೀದಿ? ಮಾನದಂಡಗಳೇನು? ನೋಂದಣಿ ದಿನಾಂಕ ಯಾವಾಗ? ಸಂಪೂರ್ಣ ಮಾಹಿತಿ.

ಇತ್ತೀಚಿನ ಸುದ್ದಿಗಳು

Related Articles