ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 2024ನೇ ವರ್ಷದಲ್ಲಿ ವ್ಯಾಸಂಗ ಮುಗಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನ.
ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ 180 ದಿನಗಳು ಕಳೆದರು ಯಾವುದೇ ಸರಕಾರಿ ಹಾಗೂ ಅರೆ ಸರಕಾರಿ ಉದ್ಯೋಗ ದೊರೆಯದೆ ಇದ್ದಲ್ಲಿ ಅಂತಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಈ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.
Yuvanidhi scheme-ಯುವನಿಧಿ ಯೋಜನೆಯಡಿ ಎಷ್ಟು ಆರ್ಥಿಕ ನೆರವು ಸಿಗಲಿದೆ?
ಪದವಿ ಅಥವಾ ಡಿಪ್ಲೋಮಾ ತೇರ್ಗಡೆಯಾದ 180 ದಿನಗಳೂ ಕಳೆದರು ಉದ್ಯೋಗ ಸಿಗದ ನಿರುದ್ಯೋಗ ಪದವೀಧರರಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000/- ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ನೀಡಲಾಗುತ್ತದೆ.
ಇದನ್ನೂ ಓದಿ:ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪರಿಷ್ಕೃತ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಉಂಟೇ ಚೆಕ್ ಮಾಡಿಕೊಳ್ಳಿ.
Yuvanidhi application apply eligibility-ಅರ್ಜಿ ಸಲ್ಲಿಸಲು ಅರ್ಹರು:
1)ಪದವಿ/ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಗರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.
2)ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಒಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ನಿಲ್ಲಿಸಲಾಗುತ್ತದೆ.
3)ಭತ್ಯೆಯನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಫಲಾನುಭವಿಗಳು ಸೇವಾ ಸಿಂಧು ಫೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
4)ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
1)ಅರ್ಜಿದಾರರ ಆಧಾರ ಕಾರ್ಡ ಪ್ರತಿ
2)ಫೋಟೋ
3)ಕಾಲೇಜು ಅಂಕಪಟ್ಟಿ
4)ನಿರುದ್ಯೋಗ ಪ್ರಮಾಣ ಪತ್ರ
5)ಬ್ಯಾಂಕ್ ಪಾಸ್ ಬುಕ್ ಪ್ರತಿ
ಇದನ್ನೂ ಓದಿ:ಕೃಷಿ ಇಲಾಖೆಯಲ್ಲಿ ಶೇ.90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ವಿತರಣೆಗೆ ಅರ್ಜಿ ಸಲ್ಲಿಸಲು ಅವಕಾಶ!
Yuvanidhi apply method-ಯುವನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಎರಡು ವಿಧಾನ ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಒಂದು ನೇರವಾಗಿ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಬಹುದು.